ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಸಿಧು ತಮ್ಮ ನಿಲುವನ್ನು ಬದಲಿಸಿದ್ದು ಇಂದು ನವದೆಹಲಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.
ನವದೆಹಲಿ (ಜ.15): ಬಿಜೆಪಿಯ ಮಾಜಿ ರಾಜ್ಯಸಭಾ ಸದಸ್ಯ, ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಸಿಧು ತಮ್ಮ ನಿಲುವನ್ನು ಬದಲಿಸಿದ್ದು ಇಂದು ನವದೆಹಲಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.
ಅಲ್ಲದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್’ನೊಂದಿಗೆ ಜೈ ಜೋಡಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.