ಕೇಂದ್ರ ಮಾಜಿ ಸಚಿವ ಅರುಣ್​ ಜೇಟ್ಲಿ ಅಸ್ವಸ್ಥ| ದೆಹಲಿಯ ಏಮ್ಸ್​ ಆಸ್ಪತ್ರೆಗೆ ಅರುಣ್​ ಜೇಟ್ಲಿ ದಾಖಲು| ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ.

ನವದೆಹಲಿ [ಆ.09]: ಬಿಜೆಪಿಯ ಹಿರಿಯ ಮುಖಂಡ ಮತ್ತು ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಎಲ್ಲರಲ್ಲಿ ಆತಂಕ ಮನೆ ಮಾಡಿದೆ.

ಈ ಹಿಂದೆ 2014ರ ನರೇಂದ್ರ ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು. ಆದ್ರೆ ಅನಾರೋಗ್ಯದ ಕಾರಣ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ.