ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಪಾಲಿಟಿಕ್ಸ್ಗೆ ಎಂಟ್ರಿ ಆಗೋದು ಖಚಿತವಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಜೊತೆ ಅನುಪಮಾ ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಹೊಸ ಪಕ್ಷ ಆರಂಭಿಸಲು ಅನುಪಮಾ ಶೆಣೈ ಸಮಾನ ಮನಸ್ಕರೊಂದಿಗೆ ಮಾತುಕತೆ ನಡೆಸಿದ್ದು, ನವೆಂಬರ್ ತಿಂಗಳಲ್ಲಿ ಹೊಸ ಪಕ್ಷ ಘೋಷಣೆ ಸಾಧ್ಯತೆ ಆಗುವ ಸಾಧ್ಯತೆ ಇದೆ.
ಬೆಂಗಳೂರು (ಅ.03): ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಪಾಲಿಟಿಕ್ಸ್ಗೆ ಎಂಟ್ರಿ ಆಗೋದು ಖಚಿತವಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಜೊತೆ ಅನುಪಮಾ ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಹೊಸ ಪಕ್ಷ ಆರಂಭಿಸಲು ಅನುಪಮಾ ಶೆಣೈ ಸಮಾನ ಮನಸ್ಕರೊಂದಿಗೆ ಮಾತುಕತೆ ನಡೆಸಿದ್ದು, ನವೆಂಬರ್ ತಿಂಗಳಲ್ಲಿ ಹೊಸ ಪಕ್ಷ ಘೋಷಣೆ ಸಾಧ್ಯತೆ ಆಗುವ ಸಾಧ್ಯತೆ ಇದೆ.
ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ರಾಜಕೀಯಕ್ಕೆ ಬರಲು ತಯಾರಿ ನಡೆಸುತ್ತಿದ್ದು, ಹೊಸ ಪಕ್ಷ ಆರಂಭಿಸಲು ಅನುಪಮಾ ಶೆಣೈ ಚಿಂತನೆ ನಡೆಸಿದ್ದಾರೆ. ಸಮಾನ ಮನಸ್ಕರೊಂದಿಗೆ ಅನುಪಮಾ ಮಾತುಕತೆ ನಡೆಸಿದ್ದು, ನವೆಂಬರ್ ತಿಂಗಳಲ್ಲಿ ಹೊಸ ಪಕ್ಷ ಘೋಷಣೆ ಸಾಧ್ಯತೆ ಇದೆ. ರಾಜ್ಯಾದ್ಯಂತ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ಗಾಂಧೀಜಿಯ ಗ್ರಾಮ ಸ್ವರಾಜ್ಯ ಕನಸು ನನಸು ಮಾಡಬೇಕಿದೆ. ಮೊದಲ ಸುತ್ತಿನ ಮಾತುಕತೆ ನಡೆದಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ನೇರವಾಗಿ ಹಂಚಿಕೊಳ್ಳಬಹುದು. ರಾಜಕೀಯಕ್ಕೆ ಭ್ರಷ್ಟತೆ ಸಂಪೂರ್ಣ ಆವರಿಸಿಕೊಂಡಿದೆ. ಪೊಲೀಸ್ ಇಲಾಖೆ ನನಗೆ ರಾಜಕೀಯ ಪಾಠ ಕಲಿಸಿದೆ ಎಂದು ಉಡುಪಿಯ ಉಚ್ಚಿಲದಲ್ಲಿ ಅನುಪಮಾ ಶೆಣೈ ಹೇಳಿಕೆ ನೀಡಿದ್ದಾರೆ.
