ಕಾಶ್ಮೀರ ಎದುರಿಸುತ್ತಿರುವ ಬಿಕ್ಕಟ್ಟು ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.  ಈ ಸಂಬಂಧ ಮಾತುಕತೆಗಾಗಿ ಸಿಬಿಐ ಮಾಜಿ ನಿರ್ದೇಶಕ ದಿನೇಶ್ವರ್ ಶರ್ಮಾರನ್ನು ನೇಮಕ ಮಾಡಲಾಗಿದೆ.

ಕಾಶ್ಮೀರ (ಅ.23): ಕಾಶ್ಮೀರ ಎದುರಿಸುತ್ತಿರುವ ಬಿಕ್ಕಟ್ಟು ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಾತುಕತೆಗಾಗಿ ಸಿಬಿಐ ಮಾಜಿ ನಿರ್ದೇಶಕ ದಿನೇಶ್ವರ್ ಶರ್ಮಾರನ್ನು ನೇಮಕ ಮಾಡಲಾಗಿದೆ.

ಇಂದು ಪತ್ರಿಕಾಗೋಷ್ಟಿಯನ್ನು ನಡೆಸಿದ ಗೃಹ ಸಚಿವ ರಾಜನಾಥ್ ಸಿಂಗ್, ದಿನೇಶ್ವರ್ ಶರ್ಮಾ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಶಾಸಕರೊಂದಿಗೆ, ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಕಾಶ್ಮೀರ ಮುಖ್ಯಮಂತ್ರಿ ಉಮರ್ಅಬ್ದುಲ್ಲಾ ಮಾತುಕತೆಯ ಫಲಿತಾಂಶಕ್ಕಾಗಿ ನಾವು ಕಾಯುತ್ತಿದ್ದೇವೆ. ಅದರ ಬಗ್ಗೆ ಗಮನ ಇಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.