ಬಾದಾಮಿ ಅಧಿಕಾರಿಗಳಿಗೆ ಸಿದ್ದು ಖಡಕ್ ವಾರ್ನಿಂಗ್ ಕೊಟ್ಟಿದ್ಯಾಕೆ?

Former Karnataka Chief Minister Siddaramaiah warns Badami officers
Highlights

ವಿಧಾನಸೌಧದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಶೇಷ ಕೊಠಡಿ ಸಿದ್ಧವಾಗುತ್ತಿದೆ. ಆದರೆ ಇದೀಗ ಸ್ವಕ್ಷೇತ್ರವಾಗಿರುವ ಬಾದಾಮಿ ಪ್ರವಾಸದಲ್ಲಿರುವ ಸಿದ್ಧರಾಮಯ್ಯ ಕ್ಷೇತ್ರದಲ್ಲಿ ಸಭೆ ನಡೆಸಿ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಕೆಂಗಣ್ಣಿಗೆ ಗುರಿಯಾಗುವ ಯಾವ ತಪ್ಪನ್ನು ಅಧಿಕಾರಿಗಳು ಮಾಡಿದರು.. ಮುಂದೆ ಓದಿ

ಬಾದಾಮಿ: ಇತ್ತ ವಿಧಾನಸೌಧದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಶೇಷ ಕೊಠಡಿ ಸಿದ್ಧವಾಗುತ್ತಿದೆ. ಆದರೆ ಇದೀಗ ಸ್ವಕ್ಷೇತ್ರವಾಗಿರುವ ಬಾದಾಮಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಸಭೆ ನಡೆಸಿ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

ಮೊದಲ ಸಭೆಯಲ್ಲೆ ಅಧಿಕಾರಿಗಳ ಚಳಿ ಬಿಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾಹಿತಿ ಕೊರತೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.  ಸಿದ್ದಾರಾಮಯ್ಯ ನೇತೃತ್ವದಲ್ಲಿ ಬಾದಾಮಿಯ ತಾಲೂಕು ಪಂಚಾಯತಿ ಆವರಣದಲ್ಲಿ ನಡೆದ ನಡೆದ ಸಭೆಯಲ್ಲಿ ಮಾಜಿ ಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಅಧಿಕಾರಿಗಳ ಬಳಿ ಮಾಹಿತಿ ಕೊರೆತೆಯಿದ್ದು ಮುಂದಿನ ಒಂದು ತಿಂಗಳೊಳಗೆ ಎಲ್ಲವೂ ಸರಿ ಇರಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
 

loader