ಮಾಜಿ ಸಚಿವ ಬಿ.ಎ. ಮೊಹಿದೀನ್​ ಇನ್ನಿಲ್ಲ

Former minister B A Mohideen passes away
Highlights

ಮಾಜಿ ಸಚಿವ ಬಿ.ಎ ಮೊಹಿದೀನ್ (80) ಇಂದು ಮುಂಜಾನೆ ನಿಧನರಾಗಿದ್ದಾರೆ.   ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮೊಹಿದೀನ್  ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರು (ಜು. 10): ಮಾಜಿ ಸಚಿವ ಬಿ.ಎ ಮೊಹಿದೀನ್ (80) ಇಂದು ಮುಂಜಾನೆ ನಿಧನರಾಗಿದ್ದಾರೆ.  

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮೊಹಿದೀನ್  ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. 

ಪಾರ್ಥಿವ ಶರೀರವನ್ನು 8 ಗಂಟೆಗೆ ಸಂಜಯ ನಗರ ನಿವಾಸಕ್ಕೆ ಕೊಂಡೊಯ್ಯಲಾಗುವುದು. 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಂತರ ಮಂಗಳೂರಿಗೆ ಕೊಂಡೊಯ್ಯಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. 

1978 ರಲ್ಲಿ ಬಂಟ್ವಾಳ ವಿಧಾನಸಭೆ ಕ್ಷೇತ್ರದಿಂದ ಮೊಹಿದೀನ್’ವರು ಮೊದಲ ಬಾರಿಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 1996ರಲ್ಲಿ ಜೆ.ಎಚ್​. ಪಟೇಲ್​ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು.

ಇವರ ಆತ್ಮಕಥೆ ‘ನನ್ನೊಳಗಿನ ನಾನು’ ಜುಲೈ 20 ಕ್ಕೆ ಬಿಡುಗಡೆಯಾಗಬೇಕಿತ್ತು. ಈ ಕೃತಿ ಭಾರೀ ಸಂಚಲನ ಮೂಡಿಸಿತ್ತು. 
 

loader