ನವದೆಹಲಿ[ಫೆ.04]: ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದ ಆಂಧ್ರಪ್ರದೇಶದ ಮುಖಂಡ ವಿ. ಕಿಶೋರ್ ಚಂದ್ರದೇವ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ‘ಇನ್ನು ಮುಂದೆ ಪಕ್ಷದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ’ ಎಂದು ಪತ್ರ ಮುಖೇನ ತಿಳಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಲ್ಕೇ ನಾಲ್ಕು ಜನ ಹೊರತುಪಡಿಸಿ ಬೇರಾರಿಗೂ ಜಾಗ ಇಲ್ಲ. ಇನ್ನು ಆಂಧ್ರಪ್ರದೇಶದಲ್ಲಿ ಇಡೀ ಕಾಂಗ್ರೆಸ್ ವ್ಯವಸ್ಥೆಗೇ ಪಾರ್ಶ್ವವಾಯು ಬಡಿದಿದ್ದು, ಸಂಪೂರ್ಣ ಅವನತಿಯತ್ತ ಸಾಗುತ್ತಿದೆ ಎಂದು ಅವರು ದೂರಿದ್ದಾರೆ.

ತಮ್ಮ ಮುಂದಿನ ನಿರ್ಧಾರವನ್ನು ಶೀಘ್ರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.