ಲಾಹೋರ್‌[ಜು.19]: ಧ್ರವೀಕೃತ ನೈಸರ್ಗಿಕ ಇಂಧನ (ಎಲ್‌ಎನ್‌ಜಿ) ಆಮದು ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಶಾಹಿದ್‌ ಖಕಾನ್‌ ಅಬ್ಬಾಸಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಸಚಿವ ಸಂಪುಟದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ಖತಾರ್‌ನಿಂದ ನೈಸರ್ಗಿಕ ಇಂಧನ ಪೂರೈಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದದಲ್ಲಿ ಬಹುಕೋಟಿ ರುಪಾಯಿ ಹಗರಣ ನಡೆದಿದೆ ಎಂಬ ಆರೋಪದ ಮೇಲೆ ಎನ್‌ಎಬಿ ತನಿಖೆ ನಡೆಸುತ್ತಿದೆ.

ಅಬ್ಬಾಸಿ ಬಂಧನವನ್ನು ವಿಪಕ್ಷಗಳು ಖಂಡಿಸಿವೆ. ಶಾಹಿದ್‌ ಅಬ್ಬಾಸಿ 2017-2018 ರಲ್ಲಿ ಪಾಕಿಸ್ತಾನದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.