ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಪ್ರಧಾನಿ ಮಗ| ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ ನೀರಜ್ ಶೇಖರ್| ಸಮಾಜವಾದಿ ಪಕ್ಷ ತೊರೆದು ಕಮಲ ಮುಡಿದ ನೀರಜ್| ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ನೀರಜ್| ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆ|

ನವದೆಹಲಿ(ಜು.16): ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ ನೀರಜ್ ಶೇಖರ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಸಮಾಜವಾದಿ ಪಕ್ಷದಲ್ಲಿದ್ದ ನೀರಜ್ ಶೇಖರ್, ನಿನ್ನೆಯಷ್ಟೇ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ನೀರಜ್ ಆರೋಪಿಸಿದ್ದರು.

Scroll to load tweet…

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ, ಪ್ರಧಾನ ಕಾರ್ಯದರ್ಶಿ ಭೂಪೇಂದರ್ ಯಾದವ್ ಅವರ ಸಮ್ಮುಖದಲ್ಲಿ ನೀರಜ್ ಶೇಖರ ಬಿಜೆಪಿ ಸೇರ್ಪಡೆಯಾಗಿದ್ದಾರೆ.