ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ನವದೆಹಲಿ (ಜೂ.11) : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾಗಿದ್ದು, ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೂಟೀನ್ ಚೆಕ್ ಅಪ್ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ವ್ಯತ್ಯಯ ಕಂಡು ಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಸೂಚಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. 

ಶ್ವಾಸಕೋಶ ತಜ್ಞ ಹಾಗೂ ಏಮ್ಸ್ ನಿರ್ದೇಶಕರಾದ ಡಾ. ಗುಲೇರಿಯಾ ಅವರು ವಾಜಪೇಯಿ ಅವರ ಆರೋಗ್ಯದ ಬಗ್ಗೆ ವೈಯಕ್ತಿಕ ನಿಗಾ ವಹಿಸಿದ್ದಾರೆ. 

93 ವರ್ಷದ ವಾಜಪೇಯಿ ಅವರು ಕಳೆದ ಕೆಲ ವರ್ಷಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ವಯೋಸಹಜವಾದ ಕಾಯಿಲೆಗಳಿಂದ ಬಳಲುತ್ತಿದ್ದಾರೆ.