ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಗಂಭೀರ! ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ! ಆಸ್ಪತ್ರೆಗೆ ಭೇಟಿ ನೀಡಿದ ರಾಜನಾಥ್ ಸಿಂಗ್! ವಾಜಪೇಯಿ ಆರೋಗ್ಯ ಸ್ಥಿರ ಎಂದು ರಾಜನಾಥ್ ಟ್ವೀಟ್! ಶೀಘ್ರದಲ್ಲೇ ಆಸ್ಪತ್ರೆಗೆ ಭೇಟಿ ನೀಡಲಿರುವ ಅಮಿತ್ ಶಾ
ನವದೆಹಲಿ(ಆ.11): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಏರುಪೇರಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಗೆ ವಾಜಪೇಯಿ ಅವರನ್ನು ದಾಖಲಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ವಾಜಪೇಯಿ, ಇತ್ತೀಚಿಗಷ್ಟೇ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಇದೀಗ ವಾಜಪೇಯಿ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಅವರನ್ನು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ವಾಜಪೇಯಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೇ ಗೃಹ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಜನಾಥ್, ವಾಜಪೇಯಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದ್ದಾರೆ. ಇನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದು, ವಾಜಪೇಯಿ ಆರೋಗ್ಯ ವಿಚಾರಿಸಲಿದ್ದಾರೆ ಎನ್ನಲಾಗಿದೆ.
