ಬೆಂಗಳೂರು[ಜು. 26] ಹಸಿರು ಶಾಲು ಹೊದ್ದು ಬಂದ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜುಲೈ 26, ಶುಕ್ರವಾರ ಸಂಜೆ 6.35ಕ್ಕೆ ರಾಜ್ಯಪಾಲ ವಿಆರ್ ವಾಲಾ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್​ ಮೂಲಕ ಸಿಎಂ ಯಡಿಯೂರಪ್ಪಗೆ ಶುಭಾಶಯ ಕೋರಿದ್ದಾರೆ. ದೋಸ್ತಿ ಸರ್ಕಾರ ಪತನದ ನಂತರ ಬಿಎಸ್​​ವೈ ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಅವಕಾಶ ಕೋರಿದ್ದರು.

ಮತ್ತೊಮ್ಮೆ ಸಿಎಂ ಆದ್ರು ಯಡಿಯೂರಪ್ಪ, ಹೊಸ ಇನಿಂಗ್ಸ್ ಆರಂಭ

ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರ ಸದನದ ವಿಶ್ವಾಸ ಕಳೆದುಕೊಂಡಿತ್ತು. ಇದಾದ ಮೇಲೆ  ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಹಕ್ಕು ಮಂಡಿಸಿ ಅಧಿಕಾರ ಸ್ಥಾಪನೆ ಮಾಡಿದೆ.