ಜನ ನೆಚ್ಚಿನ ನಾಯಕ ವಿಕ್ರಮನಾಯಕೆ ಅವರ ಅಗಲಿಕೆಗೆ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಸಂತಾಪ ಸೂಚಿಸಿದ್ದಾರೆ.
ಕೊಲಂಬೊ(ಡಿ.27): ಶ್ರೀಲಂಕಾದ ಹಿರಿಯ ರಾಜಕಾರಣಿ ಮತ್ತು 2 ಬಾರಿ ಪ್ರಧಾನಿಯಾಗಿದ್ದ ರತ್ನಸಿರಿ ವಿಕ್ರಮನಾಯಕೆ(83) ಅವರು ಅನಾರೋಗ್ಯದ ಕಾರಣದಿಂದ ಇಂದು ಕೊನೆಯುಸಿರೆಳೆದಿದ್ದಾರೆ.
1970ರಿಂದ ಹಲವು ಮುಖ್ಯವಾದ ಸಚಿವಾಲಯಗಳನ್ನು ನಿರ್ವಹಿಸುತ್ತಿದ್ದ ವಿಕ್ರಮನಾಯಕೆ ಮಂಗಳವಾರ ಬೆಳಗ್ಗೆ ಅಸುನೀಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಅನಾರೋಗ್ಯದಿಂದ ಡಿ.21ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ತುರ್ತು ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಜನ ನೆಚ್ಚಿನ ನಾಯಕ ವಿಕ್ರಮನಾಯಕೆ ಅವರ ಅಗಲಿಕೆಗೆ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಲಂಕಾ ಮಾಜಿ ಅಧ್ಯಕ್ಷ ರಾಜಪಕ್ಸೆ ಅವರೂ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
