ಬೆಂಗಳೂರು :  ಬಹು ಅಂಗಾಂಗ ವೈಫಲ್ಯದಿಂದ ನರಳುತ್ತಿರುವ ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್‌ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು ಕಳೆದ ನಾಲ್ಕು ತಿಂಗಳಿಂದ ಕೋಮಾದಲ್ಲಿದ್ದಾರೆ. ಹೊರ ಪ್ರಪಂಚದ ಅರಿವೇ ಇಲ್ಲದಂತಾಗಿದೆ ಎಂದು ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ.

67 ವರ್ಷ ವಯಸ್ಸಿನ ಧನಂಜಯ ಅವರು ಬಿಜೆಪಿಯಿಂದಲೇ ರಾಜಕೀಯ ಆರಂಭಿಸಿ ಶಾಸಕರಾಗಿ ಹಲವು ಬಾರಿ ಸಂಸದರಾಗಿದ್ದರು. ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಹಿಂದೆ ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾಗ ಅವರೊಂದಿಗೆ ಹೆಜ್ಜೆ ಹಾಕಿ ಬಲವಾಗಿ ನಿಂತಿದ್ದರು. 

ಆದರೆ, ನಂತರ ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸಾದರೂ ಧನಂಜಯ ಅವರನ್ನು ವಾಪಸ್‌ ಕರೆದುಕೊಳ್ಳಲು ಬಿಜೆಪಿ ವರಿಷ್ಠರು ನಿರಾಕರಿಸಿದರು.