ಬೆಂ.ವಿವಿ ಕುಲಪತಿ ಪ್ರೊ.ಬಿ. ತಿಮ್ಮೇಗೌಡ ಅವರು ಫೆ.6ರಂದು ನಿವೃತ್ತರಾಗುತ್ತಿದ್ದು, ಮುಂದಿನ ಒಂದು ತಿಂಗಳಿನಲ್ಲಿ ಬೆಂಗಳೂರು ಮತ್ತು ಮೈಸೂರು ವಿವಿಗಳಿಗೆ ನೂತನ ಕುಲಪತಿಗಳ ನೇಮಕ ಮಾಡುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.ಇತಿಹಾಸ ಮತ್ತು ಸಂಗ್ರಹಾಲಯ ಕಟ್ಟಡಕ್ಕೆ ಚಾಲನೆ ನೀಡಿದ ಬಳಿಕ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹಾಗೂ ವಿಧಾನಪರಿಷತ್‌ ಸದಸ್ಯ ಎಚ್‌.ಎಂ. ರೇವಣ್ಣ ಸಂಗ್ರಹಾಲಯದಲ್ಲಿರುವ ವಸ್ತುಗಳನ್ನು ವೀಕ್ಷಿಸಿದರು. ಕುಲಪತಿ ಪ್ರೊ. ಬಿ. ತಿಮ್ಮೇಗೌಡ, ಕುಲಸಚಿವ ಪ್ರೊ. ಕೆ.ಎನ್‌. ನಿಂಗೇಗೌಡ ಉಪಸ್ಥಿತರಿದ್ದರು.
ಬೆಂಗಳೂರು (ಫೆ.06): ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಆರಂಭಿಸಲಿರುವ ‘ಡಾ.ಬಿ.ಆರ್. ಅಂಬೇಡ್ಕರ್ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್' ಸ್ಥಾಪನೆಗೆ ಸರ್ಕಾರ .150 ಕೋಟಿ ಅನುದಾನ ಮಂಜೂರು ಮಾಡಿದ್ದು, ಅಂಬೇಡ್ಕರ್ ಜನ್ಮದಿನವಾದ ಏ.14 ರಂದು ಕಟ್ಟಡ ಶಂಕುಸ್ಥಾಪನೆ ನೆರವೇರಿ ಸುವುದಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಬೆಂಗಳೂರು ವಿವಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿವಿಧ ಇಲಾಖೆಗಳ ಕಟ್ಟಡ, ವಿದಾರ್ಥಿ ನಿಲಯದ ಹೆಚ್ಚುವರಿ ಕೊಠಡಿಗಳು ಹಾಗೂ ಈಜುಕೊಳ ಸೇರಿ ವಿವಿಧ ಸೇವೆಗಳಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿ, ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲೇ ಜ್ಞಾನಭಾರತಿ ಆವರಣದಲ್ಲಿ ಕಾಲೇಜು ಆರಂಭಿಸಲಾ ಗುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹೆಸರನ್ನು ಕಾಲೇಜಿಗೆ ನಾಮಕರಣ ಮಾಡಲಾ ಗುತ್ತಿದೆ ಎಂದು ತಿಳಿಸಿದರು.
ಈ ಕಾಲೇಜು ಆರಂಭದ ಹಿನ್ನೆಲೆ ಯಲ್ಲಿ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಖ್ಯಾತ ಅರ್ಥಶಾಸ್ತ್ರಜ್ಞ ಅಮತ್ರ್ಯ ಸೇನ್ರಲ್ಲಿ ಒಬ್ಬರನ್ನು ಆಹ್ವಾನಿಸಿ ಮುಂದಿನ ತಿಂಗಳು ಅರ್ಥಶಾಸ್ತ್ರಕ್ಕೆ ಕಾರ್ಯಾಗಾರ ನಡೆಸಲಾಗುವುದು. ನಾಗರಿಕ ಕ್ಷೇತ್ರದಲ್ಲಿ ಅರ್ಥಶಾಸ್ತ್ರ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಕಾರಣಕ್ಕೆ ಅರ್ಥಶಾಸ್ತ್ರ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.
