ತುಂಡಾದ ವಿದ್ಯುತ್ ತಂತಿಯಿಂದ ಶಾಕ್ ತಗುಲಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

ಬೆಳಗಾವಿ : ತುಂಡಾದ ವಿದ್ಯುತ್ ತಂತಿ ತಗುಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಹಾಗೂ ಎರಡು ಎತ್ತುಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 32 ವರ್ಷದ ರೇವಪ್ಪ ಕಲ್ಲೋಳ್ಳಿ, ಹೆಂಡತಿ, ಮಕ್ಕಳು ಸೇರಿ ನಾಲ್ವರು ಸಾವಿಗೀಡಾಗಿದ್ದಾರೆ. 

ಬೆಳಗಿನ ಜಾವ ಹೊಲಕ್ಕೆ ಹೋಗುವಾಗ ನಡೆದ ಘಟನೆ ನಡೆದಿದ್ದು, ಹೆಸ್ಕಾಂ ಅದಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ ಎನ್ನಲಾಗಿದೆ. ವಿದ್ಯುತ್ ತಂತಿಯ ಬಗ್ಗೆ ಹೆಸ್ಕಾಂ ಗೆ ದೂರು ನೀಡಿದ್ದರು ಕೂಡ ಈ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ.

ಕಡಕೋಳ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳಕ್ಕೆ ಕಡಕೋಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.