ಶ್ರೀನಗರ(ಆ.30): ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನಾ ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ ಅಲ್ತಾಫ್ ಅಹ್ಮದ್ ದಾರ್ ಅಲಿಯಾಸ್ ಅತಾಫ್ ಕಚ್ರೂ ಸೇರಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

 ಮತ್ತೊಂದೆಡೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ಶೋಪಿಯಾನ್ ಜಿಲ್ಲೆಯಲ್ಲಿರುವ ಹಣ್ಣಿನ ಮಂಡಿಯಲ್ಲಿ ಈ ಘಟನೆ ನಡೆದಿದ್ದು, ಜೀಪ್ ರಿಪೇರಿ ಮಾಡುತ್ತಿದ್ದ ಪೊಲೀಸರ ಮೇಲೆ ಉಗ್ರರು ಗುಂಡಿನ ಮಳೆಗರೆದಿದ್ದಾರೆ.

ಪೊಲೀಸರ ಹತ್ಯೆಗೈದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಆದರೆ ನಾಲ್ಪರು ಪೊಲೀಸರನ್ನ ಕಳೆದುಕೊಂಡ ಉಗ್ರರ ದಾಳಿಗೆ ಪ್ರತಿಕಾರ ತೀರಿಸಲು ಸೇನೆ ಸಜ್ಜಾಗಿದೆ.