ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಟಿಎಂಸಿ ಮುಖಂಡರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 20 ಮಂದಿ ಗಾಯಗೊಂಡಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. 

ಕೋಲ್ಕತಾ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಟಿಎಂಸಿ ಮುಖಂಡರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. 

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 116 ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮುಂಜಾನೆ 5 ಗಂಟೆಗೆ ಹೌವ್ರಾ ಪ್ರದೇಶದಲ್ಲಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಕಾರಿಗೆ ಗುದ್ದಿ ಅಪಘಾತ ಸಂಭವಿಸಿದೆ. 

ಪ್ರತ್ಯಕ್ಷ ದರ್ಶಿಗಳು ಹೇಳುವಂತೆ ಕಾರ್ ಸರಿಯಾದ ಮಾರ್ಗದಲ್ಲೇ ಆಗಮಿಸುತ್ತಿತ್ತು. ಆದರೆ ಬಸ್ ಮಾತ್ರ ಕಾರನ್ನು ಓವರ್ ಟೇಕ್ ಮಾಡುವ ಉದ್ದೇಶದಿಂದ ವೇಗವಾಗಿ ಬಂದು ಕಾರ್ ಗೆ ಗುದ್ದಿದೆ. ಇದರಿಂದ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. 

 ಒಟ್ಟು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.