ಬಾಣಸವಾಡಿಯ ಕಮ್ಮನಹಳ್ಳಿಯಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಈಗಾಗಲೇ 12 ಜನ ಶಂಕಿತ ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು(ಜ.05): ಬಾಣಸವಾಡಿಯ ಕಮ್ಮನಹಳ್ಳಿಯಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಈಗಾಗಲೇ 12 ಜನ ಶಂಕಿತ ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ ರಾತ್ರಿ 12 ಜನರನ್ನ ಅಜ್ಞಾತ ಸ್ಥಳವೊಂದರಲ್ಲಿ ನಾಲ್ಕು ತಂಡಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಪೂರ್ವ ವಿಭಾಗದ ಡಿಸಿಪಿ ಅಜಯ್‌ ಹಿಲೋರಿ, ಎಸಿಪಿ ರವಿಕುಮಾರ್‌ ಅವರು ರಾತ್ರಿ ಇಡೀ ವಶದಲ್ಲಿರುವ ಯುವಕರನ್ನ ವಿಚಾರಣೆಗೆ ಒಳಪಡಿಸಿದ್ದ ಕೃತ್ಯ ಎಸಗಿದ್ದ ಇಬ್ಬರು ಕೀಚಕರ ಮಾಹಿತಿ ಕಲೆ ಹಾಕಿದ್ದರು. ಇದರ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಜು, ಚಿನ್ನು, ಲೆನೋ ಹಾಗೂ ಅಯ್ಯಪ್ಪ ಎಂದು ಗುರುತಿಸಲಾಗಿದೆ.

ಬೈಕ್'ನಲ್ಲಿ ಯುವತಿಯನ್ನು ಫಾಲೋ ಮಾಡಿಕೊಂಡು ಬಂದು ಆಕೆಯನ್ನು ಅಪ್ಪಿ ಹಿಡಿದು ಹಿಂಸಿಸಿದವನು ಲಿನೋ ಹಾಗೂ ಗಾಡಿಯಲ್ಲೇ ಕುಳಿತು ಆತನಿಗೆ ಸಾಥ್ ನೀಡಿದವನು ಲೆನೋ ಎಂದು ತಿಳಿದು ಬಂದಿದೆ. ಈ ವೇಳೆ ಮತ್ತೊಂದು ಗಾಡಿಯಲ್ಲಿ ರಸ್ತೆ ಬದಿ ನಿಂತಿದ್ದವರು ರಾಜು ಮತ್ತು ಚಿನ್ನು ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ನಾಲ್ವರೂ ಬೆಂಗಳೂರಿನ ಫ್ರೇಜರ್ ಟೌನ್ ನಿವಾಸಿಗಳಾಗಿದ್ದಾರೆ.

ಘಟನಾ ಸ್ಥಳದಲ್ಲಿ ಇನ್ನಿಬ್ಬರು ಸಹಚರರರಿದ್ದರು ಎಂಬ ಮಾಹಿತಿ ಪೊಲೀಸರಿಗೆ ದೊರಕಿದೆ. ಆದರೆ ಅವರ್ಯಾರು ಎಂಬುವುದು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದು, ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ.