ಸ್ಕೀಮ್ ಹೇಗಿರಬೇಕು ಎಂಬುದನ್ನು ನೀವು ತೀರ್ಮಾನಿಸಿ, ನಮಗೆ ಕರಡು ಸಲ್ಲಿಸಿ. ನಾವು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾವು ಕೊಡುವ ತೀರ್ಪು  ಚಾಚೂ ತಪ್ಪದೆ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ತಿಳಿಸಿದ್ದಾರೆ.

ನವದೆಹಲಿ(ಏ.09): ಕಾವೇರಿ ನಿರ್ವಹಣಾ ಮಂಡಳಿ ಸ್ವರೂಪವನ್ನು ಮೇ.3ರೊಳಗೆ ರಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನಿರ್ದೇಶಿಸಿದೆ.

ಸ್ಕೀಮ್ ಹೇಗಿರಬೇಕು ಎಂಬುದನ್ನು ನೀವು ತೀರ್ಮಾನಿಸಿ, ನಮಗೆ ಕರಡು ಸಲ್ಲಿಸಿ. ನಾವು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾವು ಕೊಡುವ ತೀರ್ಪು ಚಾಚೂ ತಪ್ಪದೆ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ತಿಳಿಸಿದ್ದಾರೆ.

ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಸ್ಪಷ್ಟೀಕರಣ ಅರ್ಜಿಗೆ ಸಂಬಂಧಿಸಿದಂತೆ ತೀರ್ಪು ನೀಡಿದ ಕೋರ್ಟ್, 2007ರ ನ್ಯಾಯಮಂಡಳಿ ಆದೇಶದ ಪ್ರಕಾರವೇ ಮಂಡಳಿ ಇರಬೇಕೆಂಬ ವಾದಕ್ಕೆ ಸೊಪ್ಪು ಹಾಕಲಿಲ್ಲ. ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ತಮಿಳುನಾಡು ವಾದ ಮಂಡಿಸಿತ್ತು.