ಮಸೂದ್ ಅಜರ್‌'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಬೇಕೆಂಬ ಭಾರತದ ಪ್ರಸ್ತಾವಕ್ಕೆ  ಚೀನಾ ಅಡ್ಡಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಹೇಳಿಕೆ ಹೊರಬಿದ್ದಿದೆ.

ಪ್ಯಾರಿಸ್ (ಜ.16): ಜೈಷ್‌ ಎ ಮೊಹಮ್ಮದ್‌ ಮುಖ್ಯಸ್ಥ ಮಸೂದ್ ಅಜರ್‌'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಗೆ ಫ್ರಾನ್ಸ್‌ ಮನವಿ ಮಾಡಿದೆ.

ಅಜರ್‌'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಬೇಕೆಂಬ ಭಾರತದ ಪ್ರಸ್ತಾವಕ್ಕೆ ಚೀನಾ ಅಡ್ಡಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಹೇಳಿಕೆ ಹೊರಬಿದ್ದಿದೆ.

ಜೈಷ್‌ ಎ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆ ‘ಈಗಾಗಲೇ ಸಮಿತಿಯ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಟ್ಟಿಯಲ್ಲಿದೆ. ಆದ್ದರಿಂದ ಭಾರತದ ಮನವಿಯಂತೆ ಅಜರ್‌ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಲು ಸಾಕಷ್ಟು ಬಲವಾದ ವಾದಗಳಿವೆ’ ಎಂದು ಫ್ರಾನ್ಸ್‌ ವಿದೇಶಾಂಗ ಸಚಿವ ಜೀನ್‌ ಮಾರ್ಕ್‌ ಆರ್ಯಾಲ್ಟ್‌ ತಿಳಿಸಿದ್ದಾರೆ.