ರಾಜ್ಯ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಜ.4ರಿಂದ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಅರಕಲಗೋಡು (ಡಿ.23): ರಾಜ್ಯ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಜ.4ರಿಂದ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.
ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು. ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.
