ಎಲ್ಲ ವರ್ಗಗಳ ವಿದ್ಯಾರ್ಥಿನಿಯರಿಗೂ ಉಚಿತವಾಗಿ ಉನ್ನತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಲಿದೆ. ಈ ಯೋಜನೆಗೆ ಪೂರಕವಾದ ತಾಂತ್ರಿಕ, ಆರ್ಥಿಕ ವಿವರಗಳನ್ನು ಸಂಗ್ರಹಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ವಿಜಯಪುರ: ಎಲ್ಲ ವರ್ಗಗಳ ವಿದ್ಯಾರ್ಥಿನಿಯರಿಗೂ ಉಚಿತವಾಗಿ ಉನ್ನತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಲಿದೆ.

ಈ ಯೋಜನೆಗೆ ಪೂರಕವಾದ ತಾಂತ್ರಿಕ, ಆರ್ಥಿಕ ವಿವರಗಳನ್ನು ಸಂಗ್ರಹಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಇದೇ ವೇಳೆ, ಉನ್ನತ ಶಿಕ್ಷಣ ಸಚಿವ ರಾಯರಡ್ಡಿ ‘ಉತ್ಸಾಹಿ, ಭಾಳ ಶಾಣ್ಯಾ' ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶಿಕ್ಷಣ ಯೋಜನೆ ಜಾರಿಗೊಳಿಸಲು ಒತ್ತಾಯಿಸುತ್ತಲೇ ಬಂದಿದ್ದಾರೆಂದರು.