ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾ. 8 ರಂದು ನಗರದಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟಿನ್ ಗಳಲ್ಲಿ ಬಡ ಮಹಿಳೆಯರಿಗೆ ಉಚಿತ ಊಟ ಒದಗಿಸಲಾಗುವುದು ಎಂದು ಮೇಯರ್ ಸಂಪತ್ ರಾಜ್ ಪ್ರಕಟಿಸಿದರು.
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾ. 8 ರಂದು ನಗರದಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟಿನ್ ಗಳಲ್ಲಿ ಬಡ ಮಹಿಳೆಯರಿಗೆ ಉಚಿತ ಊಟ ಒದಗಿಸಲಾಗುವುದು ಎಂದು ಮೇಯರ್ ಸಂಪತ್ ರಾಜ್ ಪ್ರಕಟಿಸಿದರು.
ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮಾ.8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪಾಲಿಕೆ ವತಿಯಿಂದ ವಿಶಿಷ್ಟವಾಗಿ ಆಚರಿಸುವ ಉದ್ದೇಶದಿಂದ ಪಾಲಿಕೆಯ ಎಲ್ಲಾ ಮಹಿಳಾ ಸದಸ್ಯರ ಪರವಾಗಿ ಬಡ ಮಹಿಳೆಯರು ಇಂದಿರಾ ಕ್ಯಾಂಟಿನ್‌ಗೆ ಬಂದಾಗ ಅವರಿಗೆ ಉಚಿತವಾಗಿ ಊಟ, ತಿಂಡಿ ಒದಗಿಸಲಾಗುವುದು ಎಂದರು.

Last Updated 11, Apr 2018, 1:11 PM IST