ಸರ್ಕಾರದ ನೌಕರರಿಗೂ ಇದೀಗ ಮಾದಕ ದ್ರವ್ಯ ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಾಗಿದೆ. ಪೊಲೀಸ್‌ ಸಿಬ್ಬಂದಿ ಸೇರಿದಂತೆ ಸರ್ಕಾರದ ಎಲ್ಲಾ ನೌಕರರು ನೇಮಕಾತಿ ಮತ್ತು ಪದೋನ್ನತಿಯ ಪ್ರತಿಯೊಂದು ಹಂತದಲ್ಲೂ ಪರೀಕ್ಷೆಗೆ ಒಳಗಾಗುವುದು ಕಡ್ಡಾಯ ಎಂದು ಪಂಜಾಬ್  ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಆದೇಶ ಹೊರಡಿಸಿದ್ದಾರೆ.  

ಚಂಡೀಗಢ: ಪಂಬಾಬ್‌ನಲ್ಲಿ ಮಾದಕ ವ್ಯಸನ ಯಾವ ಪ್ರಮಾಣದಲ್ಲಿ ವ್ಯಾಪಿಸಿಕೊಂಡಿದೆ ಅಂದರೆ, ಸರ್ಕಾರದ ನೌಕರರಿಗೂ ಇದೀಗ ಮಾದಕ ದ್ರವ್ಯ ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಾಗಿದೆ. 

ಪೊಲೀಸ್‌ ಸಿಬ್ಬಂದಿ ಸೇರಿದಂತೆ ಸರ್ಕಾರದ ಎಲ್ಲಾ ನೌಕರರು ನೇಮಕಾತಿ ಮತ್ತು ಪದೋನ್ನತಿಯ ಪ್ರತಿಯೊಂದು ಹಂತದಲ್ಲೂ ಪರೀಕ್ಷೆಗೆ ಒಳಗಾಗುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಆದೇಶ ಹೊರಡಿಸಿದ್ದಾರೆ. 

ಈ ಸಂಬಂಧ ಪರೀಕ್ಷಾ ವಿಧಾನಗಳನ್ನು ಕಂಡುಕೊಳ್ಳುವಂತೆ ಹಾಗೂ ಸುತ್ತೋಲೆ ಹೊರಡಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಲೋಕಸೇವೆ ಹಾಗೂ ಪೊಲೀಸ್‌ ಇಲಾಖೆಯ ಎಲ್ಲಾ ಸಿಬ್ಬಂದಿ ವಾರ್ಷಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಾಗಿದೆ. ಪಂಜಾಬ್‌ನಲ್ಲಿ ಮಾದಕದ್ರವ್ಯದ ದುಶ್ಚಟವನ್ನು ಹೋಗಲಾಡಿಸುವ ನಿಟ್ಟಿನಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.