ಮತ್ತೆ ಇಳಿಕೆ ಕಂಡ ಪೆಟ್ರೋಲ್, ಡಿಸೇಲ್ ಬೆಲೆ..!

Fuel rates slashed for seventh consecutive day
Highlights

ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ.

ನವದೆಹಲಿ(ಜೂ.5): ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ.

ಇಂದು ಬೆಳಗ್ಗೆ ಪೆಟ್ರೋಲ್ ದರಲ್ಲಿ 46 ರಿಂದ 49 ಪೈಸೆಯವರೆಗೂ ದರ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 34 ರಿಂದ 36 ಪೈಸೆಯಷ್ಟು ದರ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರದಲ್ಲಿ ಗಣನೀಯ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿ ದರ ಕಡಿಮೆ ಮಾಡಲಾಗುತ್ತಿದೆ. 

ದೆಹಲಿ, ಕೊಲ್ಕತ್ತಾ, ಮುಂಬೈ ಮತ್ತು ಚೆನ್ನೈ ಜಿಲ್ಲೆಗಳಲ್ಲಿ ಪೆಟ್ರೋಲ್ ದರದಲ್ಲಿ 14 ರಿಂದ 16 ಪೈಸೆಯಷ್ಟು ಇಳಿಕೆ ಕಂಡುಬಂದಿದೆ. ಡೀಸೆಲ್ ದರದಲ್ಲಿ 9 ರಿಂದ 10 ಪೈಸೆಯಷ್ಟು ಇಳಿಕೆ ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 79.1 ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 70.6 ರೂ ಗೆ ಇಳಿಕೆಯಾಗಿದೆ.

loader