ರಾಜ್ಯ ವಿಧಾನ ಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚೆನ್ನಣ್ಣವರ್ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಈಗಾಗಲೇ ಕಾರ್ಯಾರಂಭ ಮಾಡಿದ್ದಾಗಿ ಹೇಳಿದ್ದಾರೆ.
ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚೆನ್ನಣ್ಣವರ್ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಈಗಾಗಲೇ ಕಾರ್ಯಾರಂಭ ಮಾಡಿದ್ದಾಗಿ ಹೇಳಿದ್ದಾರೆ.
ನಾವು ಈಗಾಗಲೇ ಕಾರ್ಯಚರಣೆ ಶುರು ಮಾಡಿದ್ದೇವೆ. ಪಶ್ಚಿಮ ವಿಭಾಗದಲ್ಲಿ ಸುಮಾರು 1376 ಮತಗಟ್ಟೆಗಳು ಬರುತ್ತವೆ.
ಎಲ್ಲಾ ರೌಡಿ ಶೀಟರ್’ಗಳ ಪರೆಡ್ ನಡೆಸುತ್ತೇವೆ. ಚುನಾವಣೆ ವೇಳೆ ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದಾಗಿ ಅವರು ಹೇಳಿದ್ದಾರೆ.
ನಮ್ಮ ಎಲ್ಲಾ ಠಾಣೆಯ ಸಿಬ್ಬಂದಿಗಳು ಹೆಚ್ಚು ಅಲರ್ಟ್ ಆಗಿದ್ದಾರೆ. ಸಮಾಜಘಾತುಕರ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಿ ಸೂಕ್ತ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
