ಬೆಂಗಳೂರು(ಸೆ.18): ಕಾವೇರಿ ನ್ಯಾಯಾಧಿಕರಣ ತೀರ್ಪಿಗೆ ಪ್ರಮುಖವಾಗಿ ನಾಳೆ ಕಾವೇರಿ ಮೇಲುಸ್ತುವಾರಿ ಸಮಿತಿಯ ಮಹತ್ವದ ಸಭೆ ವರದಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಎಸ್ಆರ್​ಪಿ ತುಕಾಡಿ, ಪ್ಯಾರಾ ಮಿಲಟರಿ ಪಡೆ, ಆರ್​ಎಎಫ್ ತುಕಡಿಗಳು ಭದ್ರತೆಗೆ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಲಿದ್ದಾರೆ. ಎಲ್ಲಾ ವಿಭಾಗದ ಭದ್ರತೆ ಆಯಾ ವಲಯ ಡಿಸಿಪಿಗಳ ಉಸ್ತುವಾರಿಗೆ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಲಿದ್ದಾರೆ ಎಂದು ಸುವರ್ಣನ್ಯೂಸ್'ಗೆ ನಗರ ಪೊಲೀಸ್ ಆಯುಕ್ತ ಮೇಘರಿಕ್ ತಿಳಿಸಿದ್ದಾರೆ.