ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ: ಪರಮೇಶ್ವರ್

G Parameshwara says yet to finalise if HD Kumaraswamy will be Karnataka CM for full 5-year term
Highlights

ಕರ್ನಾಟಕ ಮುಖ್ಯಮಂತ್ರಿಯಾಗಿ ಎಚ್.ಡಿ ಕುಮಾರಸ್ವಾಮಿ ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಅವರು ಮುಂದಿನ ೫ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆಯೇ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ.

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿಯಾಗಿ ಎಚ್.ಡಿ ಕುಮಾರಸ್ವಾಮಿ ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇನ್ನು ಇವರ ಅಧಿಕಾರ ಅವಧಿ 5 ವರ್ಷಗಳ ಕಾಲ ಮುಂದುವರಿಯಲಿದೆಯೇ ಎನ್ನುವುದು ಇನ್ನಷ್ಟೇ ತೀರ್ಮಾನವಾಗಬೇಕಿದೆ. 

ಇನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ  ವಹಿಸಿಕೊಂಡಿರುವ ಪರಮೇಶ್ವರ್ ಅವರು ಈ ಬಗ್ಗೆ ಮಾತನಾಡಿದ್ದು,  ರಾಜ್ಯದಲ್ಲಿ 5 ವರ್ಷ ಕುಮಾರಸ್ವಾಮಿ ಅವರೇ ಮುಂದುವರಿಯಲಿದ್ದಾರೆಯೇ ಎಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯಾವುದೇ ರೀತಿಯಾದ ಚರ್ಚೆಯನ್ನೂ ಕೂಡ ಮಾಡಿಲ್ಲ ಎಂದು ಹೇಳಿದ್ದಾರೆ. 

ಈ ಬಗ್ಗೆ ಇನ್ನಷ್ಟೇ ನಾವು ಚರ್ಚೆ ಮಾಡಬೇಕಿದೆ. ಯಾವ ಹುದ್ದೆಗಳನ್ನು ಜೆಡಿಎಸ್ ಗೆ ನೀಡಬೇಕು. ಯಾವುದನ್ನು ನಮ್ಮ ಬಳಿ ಇಟ್ಟುಕೊಳ್ಳಬೇಕು ಎನ್ನುವುದರ ಬಗ್ಗೆಯೂ ಕೂಡ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಇಂತಹ ಯಾವ ವಿಚಾರಗಳ ಬಗ್ಗೆಯೂ ಕೂಡ ಇನ್ನೂ ನಮ್ಮ ನಡುವೆ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ. 

ನಮ್ಮ ಗುರಿ ಏನಿದ್ದರು ಅಧಿಕಾರಕ್ಕಿಂತ  ಉತ್ತಮ ಆಡಳಿತ ನೀಡುವುದಾಗಿದೆ ಎಂದು ಹೇಳಿದ್ದಾರೆ. 

loader