ಗದಗದ ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ ತೀವ್ರ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. 

ಗದಗ : ಗದಗದ ಲಿಂಗಾಯತ ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತೀವ್ರ ಹೃದಯಾಘಾತದಿಂದ ಸ್ವಾಮೀಜಿ ಅವರು ಕೊನೆಯುಸಿರೆಳೆದಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ಗದಗದ ಚಿರಾಯು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಶನಿವಾರ ಶ್ರೀಗಳು ವಿಧಿವಶರಾಗಿದ್ದಾರೆ. 

"

ಲಿಂಗಾಯತ ಧರ್ಮದ ಪ್ರಮುಖ ಸ್ವಾಮೀಜಿಯಾಗಿದ್ದ ಅವರು ಹಲವು ಹೋರಾಟಗಳಲ್ಲಿಯೂ ಕೂಡ ಪಾಲ್ಗೊಂಡಿದ್ದರು. ಅಪಾರ ಭಕ್ತರನ್ನು ಸ್ವಾಮೀಜಿ ಅಗಲಿದ್ದು, ಭಕ್ತರು ಶೋಕ ಸಾಗರದಲ್ಲಿ ಮುಳುಗಿದೆ. 

ಸ್ವಾಮೀಜಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ. ಸಿದ್ದರಾಮಯ್ಯ ಸೇರಿದಂತೆ ಅನೇಕರು ತೀವ್ರ ಸಂತಾಪ ಸೂಚಿಸಿದ್ದಾರೆ.