ಗೈಲ್ ಅಧಿಕಾರಿಗಳ ಮನವಿ ಸ್ವೀಕರಿಸಿದ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಈ ಸಂಬಂಧ ಪರಿಶೀಲಿಸಿ ಶೌಚಾಲಯ ನಿರ್ಮಾಣ ಮಾಡಲು ಸೂಕ್ತ ಸ್ಥಳ ಗುರುತಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರು: ಕಬ್ಬನ್‌'ಪಾರ್ಕ್‌'ನಲ್ಲಿ ಈಗಿರುವ ಎರಡು ಶೌಚಾಲಯಗಳ ಜತೆಗೆ ಭಾರತೀಯ ಗ್ಯಾಸ್ ಪ್ರಾಧಿಕಾರ(ಗೈಲ್)ಸಂಸ್ಥೆ ಮತ್ತೊಂದು ಇ-ಶೌಚಾಲಯ ನಿರ್ಮಿಸಲು ಮುಂದಾಗಿದೆ. ಶೌಚಾಲಯದ ಸಮಸ್ಯೆಯಿಂದ ಪರದಾಡುತ್ತಿರುವ ಪ್ರಾವಸಿಗರ ನೆರವಿಗೆ ಮುಂದಾಗಿರುವ ಗೈಲ್ ಸಂಸ್ಥೆ ಮುಂದಿನ ಒಂದು ವಾರದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಒಂದರೆಂತೆ ಪತ್ಯೇಕ ಶೌಚಾಲಯ ನಿರ್ಮಿಸಿಕೊಡಿವುದಾಗಿ ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದೆ. ಅಲ್ಲದೆ, ಶೌಚಾಲಯಗಳನ್ನು ನಿರ್ಮಾಣ ಮಾಡಿದ ಬಳಿಕ ನಿರ್ವಹಣೆಗಾಗಿ ತೋಟಗಾರಿಕಾ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದೆ. ಗೈಲ್ ಅಧಿಕಾರಿಗಳ ಮನವಿ ಸ್ವೀಕರಿಸಿದ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಈ ಸಂಬಂಧ ಪರಿಶೀಲಿಸಿ ಶೌಚಾಲಯ ನಿರ್ಮಾಣ ಮಾಡಲು ಸೂಕ್ತ ಸ್ಥಳ ಗುರುತಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಕೃತಕವಾಗಿ ನಿರ್ಮಿಸಿದ್ದ ಶೌಚಾಲಯ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿತ್ತು. ಗೈಲ್ ಸಂಸ್ಥೆ ಈಗ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದು, ಪ್ರವಾಸಿಗರಿಗೆ ಅನುಕೂಲವಾಗಲಿದೆ.

epaperkannadaprabha.com