ಗಣೇಶನ ಮೆರವಣಿಗೆ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು(ಆ.28): ಗಣೇಶನ ಮೆರವಣಿಗೆ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ.

10ನೇ ತರಗತಿ ಓದುತ್ತಿದ್ದ ವೆಂಕಟೇಶ್ ಮೃತ ಬಾಲಕ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಣೇಶನ ಮೂರ್ತಿ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಾಗ ಇಳಿಜಾರಾದ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗ್ತಿದೆ.

ಘಟನೆ ನಡೆಯುತ್ತಿದ್ದಂತೆ ಗಣೇಶನನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಸಂಘಟಕರು ಪರಾರಿಯಾಗಿದ್ದಾರೆ. ಇನ್ನೂ ಚಾಲಕ ಕುಡಿದ ಮತ್ತಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗ್ತಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಹಾಲಕ್ಷ್ಮೀಪುರ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತಿದ್ದಾರೆ.