ಆಧ್ಯಾತ್ಮಿಕ ಗುರು ರವಿಶಂಕರ್ ಗುರೂಜಿಯವರನ್ನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಖುದ್ದು ಡ್ರೈವ್ ಮಾಡಿಕೊಂಡು ಕರೆದುಕೊಂಡು ಹೋಗಿದ್ದು, ವಕೀಲರ ಸಂಘದ ಸದಸ್ಯರಿಂದ ವಿರೋಧ ವ್ಯಕ್ತವಾಗಿದೆಯೆಮದು ವರದಿಯಾಗಿದೆ.
ಗುವಾಹಟಿ: ಆಧ್ಯಾತ್ಮಿಕ ಗುರು ರವಿಶಂಕರ್ ಗುರೂಜಿಯವರನ್ನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಖುದ್ದು ಡ್ರೈವ್ ಮಾಡಿಕೊಂಡು ಕರೆದುಕೊಂಡು ಹೋಗಿದ್ದು, ವಕೀಲರ ಸಂಘದ ಸದಸ್ಯರಿಂದ ವಿರೋಧ ವ್ಯಕ್ತವಾಗಿದೆಯೆಮದು ವರದಿಯಾಗಿದೆ.
ಕಳೆದ ಸೆ.5ರಂದು ನಡೆದ ಈಶಾನ್ಯ ಭಾರತದ ಬುಡಕಟ್ಟು ಜನರ ಸಮಾವೇಶದಲ್ಲಿ ಭಾಗವಹಿಸಲು ಗುವಾಹಟಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ರವಿಶಂಕರ್ ಗುರೂಜಿಯವರನ್ನು ಸಿಜೆ ಅರ್ಜಿತ್ ಸಿಂಗ್ ಖುದ್ದು ಡ್ರೈವ್ ಮಾಡಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆನ್ನಲಾಗಿದೆ.
ಆದರೆ ಮುಖ್ಯ ನ್ಯಾಯಾಧಿಶರ ಈ ಕ್ರಮ ಹೈಕೋರ್ಟ್ ನಿಯಮಗಳ ಉಲ್ಲಂಘನೆಯಾಗಿದೆಯೆಂದು ಗುವಾಹಟಿ ಹೈಕೋರ್ಟ್ ಬಾರ್ ಅಸೋಸಿಯೇಶನ್’ನ ಕೆಲವು ಸದಸ್ಯರು ಅಕ್ಷೇಪ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ.
ಮುಂದಿನ ಮಹಾಸಭೆಯಲ್ಲಿ ಈ ವಿಷಯದ ಕುರಿತು ಚರ್ಚಿಸುವುದಾಗಿ ಹಾಗೂ ಸುಪ್ರೀಂ ಕೋರ್ಟ್’ನ ಮುಖ್ಯ ನ್ಯಾಯಾಧೀಶರಿಗೆ ದೂರು ಸಲ್ಲಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆಂದು ವರದಿಯಾಗಿದೆ. (ಚಿತ್ರಕೃಪೆ:ಟೈಮ್ 8)
