ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐವರು ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಚಿಂತನೆ ನಡೆಸಿದೆ.
ಬೆಂಗಳೂರು : ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐವರು ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಚಿಂತನೆ ನಡೆಸಿದೆ.
ಆರೋಪಿಗಳಾದ ಪುಣೆಯ ಚಿಂಚವಾಡದ ಅಮೋಲ್ ಕಾಳೆ, ಅಮಿತ್ ದೇಗ್ವೆಕರ್, ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಪ್ರವೀಣ್ ಅಲಿಯಾಸ್ ಸುಜೀತ್ ಕುಮಾರ್, ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪ ಯಡವೆ ಅಲಿಯಾಸ್ ಮನೋಜ್ ಹಾಗೂ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ ಯಡಿ ಪ್ರಕರಣ ದಾಖಲಿಸುವ ಸಂಬಂಧ ಎಸ್‌ಐಟಿ ಕಾನೂನು ತಜ್ಞರ ಸಲಹೆ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ಅದಕ್ಕೆ ಅಗತ್ಯವಾದ ಪೂರಕ ದಾಖಲೆಗಳನ್ನು ಸಂಗ್ರಹಿಸಲು ಮುಂದಾಗಿದ್ದು, ಆರೋಪಿಗಳು ಗುಂಪು ಕಟ್ಟಿಕೊಂಡು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದರು ಎಂಬುದಕ್ಕೆ ಪುರಾ ವೆಗಳು ಸಿಕ್ಕಿವೆ. ಅವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸುವ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
