ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ರಾಜ್ಯ ಗೃಹ ಸಚಿವ ರಾಮಲಿಂಗಾರೆಡ್ಡಿ ಪುನರುಚ್ಚರಿಸಿದ್ದಾರೆ.
ಯಾದಗಿರಿ: ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ರಾಜ್ಯ ಗೃಹ ಸಚಿವ ರಾಮಲಿಂಗಾರೆಡ್ಡಿ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಭಾನುವಾರ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಅದನ್ನು ಮಾಧ್ಯಮ ಹಾಗೂ ಸಾರ್ವಜನಿಕರ ಮುಂದೆ ಹೇಳಲು ಸಾಧ್ಯವಿಲ್ಲ ಎಂದರು. ಪ್ರಕರಣ ಕುರಿತಂತೆ ಎಸ್‌ಐಟಿ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲಾಗಿದೆ ಎಂಬ ಮಾಧ್ಯಮಗಳ ವರದಿ ಉಹಾಪೋಹದಿಂದ ಕೂಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಅಧಿಕಾರಿಗಳ ನೇಮಕ ಮಾಡಲಾಗುವುದು ಎಂದರು.
ಶಂಕಿತ ಆರೋಪಿಯು ಹಣೆಗೆ ಕುಂಕುಮ ಧರಿಸಿರುವ ರೇಖಾ ಚಿತ್ರ ಬಿಡುಗಡೆ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎಸ್‌ಐಟಿ ಅಧಿಕಾರಿಗಳು ಸ್ಥಳೀಯರ ಮಾಹಿತಿ ಆಧರಿಸಿ ರೇಖಾ ಚಿತ್ರ
ರಚಿಸಿದ್ದಾರೆ. ಬಲಪಂಥೀಯ, ಎಡಪಂಥೀಯರು ಎಂಬ ಬಗ್ಗೆ ಅವರು ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ಬಿಜೆಪಿಯವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದು ಎಂದರು.
ಬಿಎಸ್‌ವೈಗೆ ಗೊಂದಲ: ಟಿಪ್ಪು ಜಯಂತಿ ಸರ್ಕಾಕಾರದ ಕಾರ್ಯಕ್ರಮವಾಗಿದ್ದು, ಜಯಂತಿ ನಡೆಯುತ್ತದೆ. ಇನ್ನೂ ಬಿ.ಎಸ್.ಯಡಿಯೂರಪ್ಪ ಅವರು ಕೆಜೆಪಿಯಲ್ಲಿದ್ದಾಗ ಟಿಪ್ಪುವಿನ ಬಗ್ಗೆ ಹಾಡಿ ಹೊಗಳಿದ್ದಾರೆ. ಅವರಂತೆ ಟೊಪ್ಪಿಗೆ ಹಾಗೂ ಕೈಯಲ್ಲಿ ಖಡ್ಗ ಹಿಡಿದಿದ್ದರು ಈಗ ಅವರು ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ. ಟಿಪ್ಪು ಜಯಂತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿಯೇ ಗೊಂದಲವಿದೆ ಎಂದು ಹೇಳಿದರು.
