ಗೌರಿ ಲಂಕೇಶ್ ಹತ್ಯೆ ಹಿಂದೆ ದಕ್ಷಿಣ ಕನ್ನಡ ಶಕ್ತಿ

First Published 30, Jan 2018, 8:19 AM IST
gauri Murder Case Must Search In Dakshina Kannada Says Doreswamy
Highlights

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಶೋಧ ನಡೆಸಬೇಕಿದ್ದು, ರಾಜ್ಯ ಸರ್ಕಾರ ಆದಷ್ಟು ಬೇಗನೆ ಹಂತಕರ ಹಿಂದಿರುವ ಕೈಗಳನ್ನು ಪತ್ತೆ ಮಾಡಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಶೋಧ ನಡೆಸಬೇಕಿದ್ದು, ರಾಜ್ಯ ಸರ್ಕಾರ ಆದಷ್ಟು ಬೇಗನೆ ಹಂತಕರ ಹಿಂದಿರುವ ಕೈಗಳನ್ನು ಪತ್ತೆ ಮಾಡಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಗರದ ಟೌನ್‌ಹಾಲ್‌ನಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಜನ್ಮದಿನ ‘ಗೌರಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಗೌರಿ ಲಂಕೇಶ್ ಹಂತಕರನ್ನು ಪತ್ತೆ ಮಾಡಲು ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಆದರೆ, ಎಸ್‌ಐಟಿ ಯಾರನ್ನು ಬಂಧಿಸಿದೆ ಎಂಬುದು ನನಗೆ ಗೊತ್ತಿಲ್ಲ. ಹೀಗಾಗಿ ದಕ್ಷಿಣಕನ್ನಡದಲ್ಲಿ ಇನ್ನಷ್ಟು ಆಳವಾಗಿ ತಪಾಸಣೆ ನಡೆಸಿದರೆ ಹಂತಕರ ಹಿಂದಿನ ಕೈಗಳು ಸಿಗಬಹುದು. ಪಿಸ್ತೂಲ್ ತಯಾರಿಸುವವರನ್ನು, ಪಿಸ್ತೂಲಿನಿಂದ ಗುಂಡು ಹಾರಿಸಿದವರನ್ನು ಬಂಧಿಸುವ ಬದಲಾಗಿ, ಗುಂಡು ಚಲಾಯಿಸಲು ಹೇಳಿದವರನ್ನು ಬಂಧಿಸ ಬೇಕಾಗಿದೆ ಎಂದು ಹೇಳಿದರು.

loader