ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮದುವೆಯ ವಿಚಾರ ಆಗಾಗ ಚರ್ಚೆಯಾಗುತ್ತಿರುತ್ತದೆ. ಇದಕ್ಕೆ ತೆಲುಗು ದೇಶಂ ಪಕ್ಷದ ಸಂಸದ ಜೆ.ಸಿ. ದಿವಾಕರ್‌ ರೆಡ್ಡಿ ಹೊಸ ಸೇರ್ಪಡೆಯಾಗಿದ್ದಾರೆ. 

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮದುವೆಯ ವಿಚಾರ ಆಗಾಗ ಚರ್ಚೆಯಾಗುತ್ತಿರುತ್ತದೆ. ಇದಕ್ಕೆ ತೆಲುಗು ದೇಶಂ ಪಕ್ಷದ ಸಂಸದ ಜೆ.ಸಿ. ದಿವಾಕರ್‌ ರೆಡ್ಡಿ ಹೊಸ ಸೇರ್ಪಡೆಯಾಗಿದ್ದಾರೆ. 

‘ಉತ್ತರ ಪ್ರದೇಶದಲ್ಲಿ ರಾಹುಲ್‌ಗೆ ಬ್ರಾಹ್ಮಣರ ಬೆಂಬಲ ಅಗತ್ಯವಿದೆ. ಹೀಗಾಗಿ ಅಲ್ಲಿಯ ಉತ್ತಮ ಬ್ರಾಹ್ಮಣ ಯುವತಿಯೊಬ್ಬಳನ್ನು ಆರಿಸಿ ಮದುವೆ ಮಾಡಿ ಎಂದು ಸೋನಿಯಾ ಗಾಂಧಿಗೆ ನಾನು ಸಲಹೆ ನೀಡಿದ್ದೆ. ಆದರೆ, ಅವರು ನನ್ನ ಮಾತನ್ನು ಕೇಳಿಸಿಕೊಳ್ಳಲಿಲ್ಲ ಎಂದು ದಿವಾಕರ್‌ ರೆಡ್ಡಿ ಹೇಳಿದ್ದಾರೆ. ಈ ಸಲಹೆ ನೀಡಿದಾಗ ತಾವು ಕಾಂಗ್ರೆಸ್‌ನಲ್ಲಿ ಇದ್ದೆ ಎಂದು ಅವರು ಹೇಳಿದ್ದಾರೆ.