ಜನಸಂಖ್ಯೆ ನಿಯಂತ್ರಣಕ್ಕೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಲಹೆ| ಸಲಹೆ ಮೂಲಕ ಮತ್ತೊಂದು ವಿವಾದಕ್ಕೆ ಕಾರಣರಾದ ಬಿಜೆಪಿ ನಾಯಕ| ‘ದೇಶದ ಜನಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ’| ‘ಜನಸಂಖ್ಯೆ ಹೆಚ್ಚಳಕ್ಕೆ ಧಾರ್ಮಿಕ ನಂಬಿಕೆಗಳು ಪ್ರಮುಖ ಕಾರಣ’|ಜನಸಂಖ್ಯೆ ನಿಯಂತ್ರಣಕ್ಕೆ ಮಸೂದೆ ಜಾರಿಗೆ ತರಲು ಮನವಿ| ಎಲ್ಲ ರಾಜಕೀಯ ಪಕ್ಷಗಳೂ ಮಸೂದೆ ಜಾರಿಗೆ ತರಲು ಸಹಕರಿಸಬೇಕು ಎಂದ ಗಿರಿರಾಜ್|
ನವದೆಹಲಿ(ಜು.11): ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.
ದೇಶದ ಜನಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಇದಕ್ಕೆ ಧಾರ್ಮಿಕ ನಂಬಿಕೆಗಳು ಪ್ರಮುಖ ಕಾರಣ ಎಂದು ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜನಸಂಖ್ಯೆ ನಿಯಂತ್ರಣಕ್ಕೆ ಮಸೂದೆ ಜಾರಿಗೆ ತರಲು ದೇಶದ ಎಲ್ಲ ರಾಜಕೀಯ ಪಕ್ಷಗಳು ಮನಸ್ಸು ಮಾಡಬೇಕಿದೆ ಎಂದೂ ಗಿರಿರಾಜ್ ಸಿಂಗ್ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಗಿರಿರಾಜ್, ಜನಸಂಖ್ಯೆ ನಿಯಂತ್ರಣ ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಧಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು ಒಟ್ಟಾಗಿ ಕಾನೂನು ರೂಪಿಸಲು ಸಹಕರಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.
