ಯುವತಿ ಬಗ್ಗೆ ಇಲ್ಲ ಸಲ್ಲದ ಅಪ ಪ್ರಚಾರ ಮಾಡುತ್ತಿದ್ದ ವಿಕೃತ ಮನಸ್ಸಿನ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿ ನಡೆದಿದೆ.
ರೇಗಿಸಿ ಸಿಕ್ಕಿ ಹಾಕಿಕೊಂಡ ಯುವಕನಿಗೆ ಯುವತಿ ಚಪ್ಪಲಿ ಸೇವೆ ಮಾಡಿದ್ದಾಳೆ. ಜತೆಗೆ ಸ್ಥಳೀಯರು ಕೂಡ ಯುವತಿಗೆ ಸಾಥ್ ನೀಡಿದ್ದು, ಆರೋಪಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಸ್ಥಳಿಯರ ಮೊಬೈಲ್ನಲ್ಲಿ ರೆಕಾರ್ಡ್ ಆಗಿದ್ದು ಎಲ್ಲೆಡೆ ವೈರಲ್ ಆಗಿದೆ.
