ಸ್ಪರ್ಧೆಯೊಂದರಲ್ಲಿ ನೃತ್ಯ ಮಾಡುತ್ತಿದ್ದಂತೆಯೇ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. 

ಮುಂಬೈ : ಸ್ಪರ್ಧೆಯೊಂದರಲ್ಲಿ ನೃತ್ಯ ಮಾಡುತ್ತಿದ್ದ ವೇಳೆ 12 ವರ್ಷದ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಮುಂಬೈನ ಕಂಡಿವಾಲಿ ಪ್ರದೇಶದಲ್ಲಿ ನಡೆದಿದೆ. 

ಮನೀಶಾ ಶರ್ಮ ಎಂಬ ಬಾಲಕಿ ಮಂಗಳವಾರ ರಾತ್ರಿ ನೃತ್ಯ ಮಾಡುತ್ತಿದ್ದ ವೇಳೆ ಬಾಲಕಿ ಏಕಾ ಏಕಿ ಕುಸಿದು ಬಿದ್ದಿದ್ದಾಳೆ. 

ಈ ವೇಳೆ ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಷ್ಟರಲ್ಲೇ ಬಾಲಕಿ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು. 

ಶವ ಪರೀಕ್ಷೆಯ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದ್ದಾರೆ. 

ಸದ್ಯ ಕಂಡಿವಾಲಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.