ಬೆಂಗಳೂರಿನ ಜೆಪಿ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ. ಕಳೆದ ಕೆಲವು ದಿನಗಳಿಂದ 15 ವರ್ಷದ ಬಾಲಕನೊಬ್ಬ 15 ವರ್ಷದ ನಿಸರ್ಗಾಳಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಲ್ಲದೆ ತನ್ನ ಪ್ರೀತಿಗೆ ಒಪ್ದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಕೂಡಾ ಹಾಕಿದ್ದ. ಇದರಿಂದ ನೊಂದ ಬಾಲಕಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು(ಅ.20): ಪ್ರೀತ್ಸೆ ಪ್ರೀತ್ಸೆ ಅಂತ ಪೀಡಿಸುತ್ತಿದ್ದ ಬಾಲಕನ ಕಾಟಕ್ಕೆ ಬೇಸತ್ತ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಜೆಪಿ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ. ಕಳೆದ ಕೆಲವು ದಿನಗಳಿಂದ 15 ವರ್ಷದ ಬಾಲಕನೊಬ್ಬ 15 ವರ್ಷದ ನಿಸರ್ಗಾಳಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಲ್ಲದೆ ತನ್ನ ಪ್ರೀತಿಗೆ ಒಪ್ದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಕೂಡಾ ಹಾಕಿದ್ದ. ಇದರಿಂದ ನೊಂದ ಬಾಲಕಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸಂಬಂಧ ಮೃತ ಬಾಲಕಿಯ ತಾಯಿ ಇಬ್ಬರು ಬಾಲಕರ ವಿರುದ್ಧ ಜೆಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ಮುಂದುವರೆದಿದೆ.