ಮಂಗಳೂರು (ಡಿ. 14): ಥರ್ಮೋ ಮೀಟರಿನ ಮರ್ಕ್ಯೂರಿ ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ  ಮಡಂತ್ಯಾರು ಕ್ಲಿನಿಕ್ ನಲ್ಲಿ ನಡೆದಿದೆ.  

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರುವಿನ ಕ್ಲಿನಿಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸವಿತಾ ಎಂಬ ಯುವತಿ ಕೆಲಸ ಮಾಡುತ್ತಿದ್ದರು.  ಥರ್ಮಾಕೋಲ್ ನಲ್ಲಿರುವ ಮರ್ಕ್ಯೂರಿಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 

ಗಂಭೀರ ಸ್ಥಿತಿಯಲ್ಲಿರುವ ಸವಿತಾರನ್ನು  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.