ನಿಶ್ಚಿತಾರ್ಥದ ನಂತರ ಮದುವೆ ಮುರಿದುಬಿದ್ದಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ನಾಗಲಕ್ಷ್ಮಿ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಯುವತಿ.

ಬೆಂಗಳೂರು(ಮಾ.01): ನಿಶ್ಚಿತಾರ್ಥದ ನಂತರ ಮದುವೆ ಮುರಿದುಬಿದ್ದಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ನಾಗಲಕ್ಷ್ಮಿ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಯುವತಿ.

ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಯಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಾಗಲಕ್ಷ್ಮಿ ನೇಣಿಗೆ ಶರಣಾಗಿದ್ದಾಳೆ. ಒಂದೂವರೆ ವರ್ಷದ ಹಿಂದೆ ಕಾರ್ತಿಕ್ ಎಂಬಾತನೊಂದಿಗೆ ನಿಶ್ಚಿತಾರ್ಥವಾಗಿತ್ತು. ಬಳಿಕ ನಿಶ್ಚಿತಾರ್ಥವಾದ ಹದಿನೈದು ದಿನಕ್ಕೆ ಕಾರ್ತಿಕ್ ತಂದೆ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಒಂದು ವರ್ಷದ ನಂತರ ಮದುವೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೆಲ ದಿನಗಳ ಹಿಂದೆ ಮದುವೆಯಾಗಲು ಸಾಧ್ಯವಿಲ್ಲ ಅಂತಾ ಯುವತಿಗೆ ಕಾರ್ತಿಕ್​ ನೋಟಿಸ್ ಕೊಟ್ಟಿದ್ದ. ಇದರಿಂದ ಮನನೊಂದ ಯುವತಿ ನಾಗಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.