ಪ್ರತಿಭಾವಂತ ವಿದ್ಯಾರ್ಥಿನಿ ಸುಶ್ಮೀತಾ ಆತ್ಮಹತ್ಯೆ | ಬಾವಿಗೆ ಹಾರಿ ಸಾವಿಗೆ ಶರಣಾದ ಸುಶ್ಮೀತಾ | ಖೋಖೋ ಪಂದ್ಯಾವಳಿಯಲ್ಲಿ  ಉತ್ತಮ ಪ್ರದರ್ಶನ | ರಾಜ್ಯ ಮಟ್ಟದ ಖೋಖೋ ಪಂದ್ಯಾವಳಿಗೆ ಆಯ್ಕೆಯಾದ ಸುಶ್ಮೀತಾ | ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮಂಗಳೂರು (ಅ.08): ಬಾಗಲಕೋಟೆಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಅಘಾತಕಾರಿ ಘಟನೆ ನಡೆದಿರುವ ಬೆನ್ನಲ್ಲೇ ಮಂಗಳೂರಿ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

ಮಂಗಳೂರಿನಲ್ಲೂ ಖೋಖೋ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೊಕ್ರಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಸುಶ್ಮೀತಾ ಆತ್ಮಹತ್ಯೆಗೆ ಶರಣಾದ ಯುವತಿ.

ಜಂತಿಗೋಳಿ ಮೋಹನಂದ ಭಂಡಾರಿ ಮತ್ತು ಪ್ರೇಮ ದಂಪತಿ ಮಗಳಾದ ಈಕೆ ಇತ್ತಿಚೆಗೆ ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಳು.

ನಿನ್ನೆ ರಾತ್ರಿ ಮನೆಮಂದಿಯೊಂದಿಗೆ ಊಟ ಮಾಡಿ ಮಲಗಿದ್ದಳು , ಆದರೆ ಇಂದು ಬೆಳಗ್ಗೆ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಟ ನಡೆಸಿದಾಗ ಮನೆಯ ಮುಂದಿನ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. 

ಈ ಸಂಬಂಧ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.