ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಈ ತಿಂಗಳ 27ರಂದು ಪಕ್ಷದ ಮುಖಂಡರು ಸಭೆ ನಡೆಸುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಬೆಂಗಳೂರು (ಏ.22): ಪದಾಧಿಕಾರಿಗಳ ನೇಮಕ ಕುರಿತಂತೆ ಅಸಮಾಧಾನ​ಗೊಂಡಿರುವ ಮುಖಂಡರು ದೆಹಲಿಗೆ ತೆರಳಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ದೂರು ನೀಡುತ್ತಾರೆ ಎಂ​ಬುದರ ಬಗ್ಗೆ ಬಿಜೆಪಿ ರಾಜ್ಯಾ​ಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ತೀಕ್ಷ್ಣ ಪ್ರತಿಕ್ರಿಯೆ ಇದು.

ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಈ ತಿಂಗಳ 27ರಂದು ಪಕ್ಷದ ಮುಖಂಡರು ಸಭೆ ನಡೆಸುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ನಾಲ್ವರು ಮುಖಂಡರನ್ನು ಒಳಗೊಂಡ ಪಕ್ಷದ ಉನ್ನತ ಸಮಿತಿ ಇದುವರೆಗೆ ಒಂದೇ ಒಂದು ಸಭೆ ನಡೆಸದೇ ಇರುವುದು ಅಶಿಸ್ತು ಎಂಬ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ನಾನು ಯಾರ ಹೇಳಿಕೆಗಳಿಗೂ ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.