ಪಣಜಿ : ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಕ್ಕರ್ ಅವರ ನಿಧನದಿಂದ ತೆರವಾಗಿದ್ದ ಪಣಜಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡಿದೆ. ಕಳೆದ 25 ವರ್ಷಗಳಲ್ಲಿ ಮೊದಲ ಬಾರಿ ಪಣಜಿಯಲ್ಲಿ ಗೆಲುವು ಸಾಧಿಸಿದೆ. 

ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಗೋವಾದಲ್ಲಿ ಉಪ ಚುನಾವಣೆ ನಡೆದಿದ್ದು ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮನೋಹರ್ ಪರಿಕ್ಕರ್ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಸೋಲು ಕಂಡಿದೆ. 

ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಟಾನಾಸಿಯೋ ಮೋನ್ಸರೆಟ್ಟೆ ಬಿಜೆಪಿ ಅಭ್ಯರ್ಥಿ ಸಿದ್ಧಾರ್ಥ್ ವಿರುದ್ಧ ಗೆಲುವು ಪಡೆದಿದ್ದಾರೆ. 

ಗೋವಾದಲ್ಲಿ 2017ರಲ್ಲಿ ಚುನಾವಣೆ ನಡೆದಿದ್ದು, ಪರಕ್ಕರ್ ನಿಧನದಿಂದ ಈ ಕ್ಷೇತ್ರ ತೆರವಾಗಿದ್ದು,  ಮೇ 19 ರಂದು ಚುನಾವಣೆ ನಡೆದಿತ್ತು. 1994ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದು, ಮೊದಲ ಬಾರಿ ಕೈಗೆ ವಿಜಯ ಒಲಿದಿದೆ.