ಗೋವಾ ಸಿಎ ಪರ್ರಿಕರ್‌ಗೆ ಕ್ಯಾನ್ಸರ್‌ ವರದಿ ಸುಳ್ಳು: ಮುಂಬೈ ಆಸ್ಪತ್ರೆ ಸ್ಪಷ್ಟನೆ

First Published 19, Feb 2018, 7:25 AM IST
Goa CM is not diagnosed with cancer says mumbai hospital
Highlights

ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ ಮೆದೋಜೀರಕಾಂಗ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಕೆಲ ಮಾಧ್ಯಮಗಳ ವರದಿಯನ್ನು ಮುಂಬೈನ ಲೀಲಾವತಿ ಆಸ್ಪತ್ರೆ ಸ್ಪಷ್ಟವಾಗಿ ತಳ್ಳಿಹಾಕಿದೆ.

ಮುಂಬೈ: ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ ಮೆದೋಜೀರಕಾಂಗ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಕೆಲ ಮಾಧ್ಯಮಗಳ ವರದಿಯನ್ನು ಮುಂಬೈನ ಲೀಲಾವತಿ ಆಸ್ಪತ್ರೆ ಸ್ಪಷ್ಟವಾಗಿ ತಳ್ಳಿಹಾಕಿದೆ. ಈ ಬಗ್ಗೆ ಭಾನುವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ಲೀಲಾವತಿ ಆಸ್ಪತ್ರೆ, ಪರ್ರಿಕರ್‌ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದೆ.

ಅಲ್ಲದೆ, ಅವರು ಭಾರತ ಮತ್ತು ದಕ್ಷಿಣ ಆಫ್ರಿಕಾದ ಕ್ರಿಕೆಟ್‌ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ ಎಂದು ಪರ್ರಿಕರ್‌ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಪಿ.ಜಗನ್ನಾಥ್‌ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಗೋವಾ ಮುಖ್ಯಮಂತ್ರಿ ಕಚೇರಿ ಟ್ವೀಟ್‌ ಮಾಡಿ, ‘ಮುಖ್ಯಮಂತ್ರಿ ಬಗ್ಗೆ ಹಲವು ಸುಳ್ಳು ಸುದ್ದಿಗಳು ಮತ್ತು ಅವರಿಗೆ ಅಪಚಾರ ಎಸಗುವ ವರದಿಗಳು ಎಲ್ಲೆಡೆ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇವೆಲ್ಲವೂ ಸುಳ್ಳು ಸುದ್ದಿಗಳು,’ ಎಂದು ಉಲ್ಲೇಖಿಸಿದೆ.

loader