ಪಣಜಿ : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವೈದ್ಯರ ನಿಗಾದಲ್ಲಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಹೇಳಿವೆ. 

63 ವರ್ಷದ ಹಿರಿಯ ಬಿಜೆಪಿ ನಾಯಕರಾದ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ  ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಫೆ. 23ರ ಶನಿವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೂಗಿಗೆ ಪೈಪ್ ಹಾಕಿಕೊಂಡೇ ಬಜೆಟ್ ಮಂಡಿಸಿದ ಪರಿಕ್ಕರ್! 

ಸದ್ಯ ಪರಿಕ್ಕರ್ ಅವರು ವೈದ್ಯರ ನಿಗಾದಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ. ಇನ್ನಷ್ಟೇ ವೈದ್ಯರು ಡಿಸ್ಚಾರ್ಜ್ ಮಾಡುವ ಬಗ್ಗೆ ನಿರ್ಧರಿಸಬೇಕಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಢಿದೆ. 

ಎಂಡೋಸ್ಕೋಪಿ ಸೇರಿದಂತೆ ವಿವಿಧ ರೀತಿಯ ಚಿಕಿತ್ಸೆ ನೀಡಲಾಗಿದೆ. ಒಟ್ಟು 48 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದೆ.