ಪಣಜಿ[ಜು.10]: ವಿವಾಹ ನೋಂದಣಿಗೂ ಮುನ್ನ ಎಚ್‌ಐವಿ ಪರೀಕ್ಷೆ ಕಡ್ಡಾಯ ಮಾಡಲು ಗೋವಾ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಕಾನೂನು ವಿಭಾಗದ ಅಭಿಪ್ರಾಯ ಕೋರಲಾಗಿದ್ದು, ಅಲ್ಲಿ ಅನುಮೋದನೆ ಸಿಕ್ಕಲ್ಲಿ ಮುಂಬರುವ ಮುಂಗಾರು ಅಧಿವೇಶನದಲ್ಲಿ ಅದನ್ನು ವಿಧಾನಸಭೆಯಲ್ಲಿ ಮಂಡಿಸಿ ಕಾಯ್ದೆಯಾಗಿ ರೂಪಿಸಲಾಗುವುದು ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್‌ ರಾಣೆ ಮಾಹಿತಿ ನೀಡಿದ್ದಾರೆ.

2006ರಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಕೂಡ ಇದೇ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿತ್ತು. ಆದರೆ ವಿವಿಧ ಪಕ್ಷಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಸ್ತಾವವನ್ನು ಕೈಬಿಟ್ಟಿತ್ತು.