Asianet Suvarna News Asianet Suvarna News

ಮಾರುಕಟ್ಟೆಯಲ್ಲಿ ಏರಿದ ಬಂಗಾರದ ಬೆಲೆ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಇದೀಗ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ.

Gold futures climb Rs 131 on firm global cues

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಇದೀಗ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. 10 ಗ್ರಾಂ ಚಿನ್ನಕ್ಕೆ 131 ರು.ಗಳಷ್ಟು ಏರಿಕೆಯಾಗಿದ್ದು, ಇದರಿಂದ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನಕ್ಕೆ 30,765 ರು.ಗಳಾಗಿದೆ.

ಸ್ಥಳೀಯ ಮಾರುಕಟ್ಟೆಗಳಲ್ಲಿ ಇದರಿಂದ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಜಾಗತಿಕ ಕಾರಣದಿಂದ ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.  ಸದ್ಯ ಇನ್ನು ಬೆಳ್ಳಿಯ ದರದಲ್ಲಿಯೂ ಕೂಡ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಳಿತ ಕಂಡು ಬರುತ್ತಿದೆ.

 ಚಿನ್ನದ ಬೆಲೆಯಲ್ಲಿ 0.43 ರಷ್ಟು ಏರಿಕೆ ಕಂಡು ಬಂದಂತಾಗಿದೆ. ಅಲ್ಲದೇ ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೇಡಿಕೆಯು ಕೂಡ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗುವ ಹಿನ್ನೆಲೆಯಲ್ಲಿಯೂ ಕೂಡ ಏರಿಕೆ ಕಂಡು ಬರುತ್ತದೆ.

Follow Us:
Download App:
  • android
  • ios